ಜಾಮ್‌ನಗರ: ಗುಜರಾತ್‌ನ ಜಾಮ್‌ನಗರದ ಗೋವಾನಾ ಗ್ರಾಮದಲ್ಲಿ ಮಂಗಳವಾರ ಸಂಜೆ ಕೊಳವೆ ಬಾವಿಗೆ ಬಿದಿದ್ದ ಎರಡು ವರ್ಷದ ಬಾಲಕನನ್ನು ಬುಧವಾರ ಮುಂಜಾನೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಸಂಜೆ 6.30ರ ಸುಮಾರಿಗೆ ಮಗು ಬೋರ್‌ವೆಲ್‌ಗೆ ಬಿದ್ದಿತ್ತು.ಇಂದು ಮುಂಜಾನೆ ಸುಮಾರು 4:00 ಗಂಟೆಗೆ ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಲಾಯಿತು. ನಂತರ ಮಗುವನ್ನು ತಕ್ಷಣ ಚಿಕಿತ್ಸೆಗಾಗಿ ಜಾಮ್‌ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಸೇವಾ ಇಲಾಖೆಯ ಎರಡು ತಂಡಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡವು.
ಜನವರಿಯಲ್ಲಿ, ಗುಜರಾತ್‌ನ ದ್ವಾರಕಾ ಜಿಲ್ಲೆಯಲ್ಲಿ ಕೊಳವೆ ಬಾವಿಗೆ ಬಿದಿದ್ದ ಮೂರು ವರ್ಷದ ಬಾಲಕಿಯನ್ನು ರಕ್ಷಿಸಿದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿತ್ತು. ಏಂಜೆಲ್ ಸಖ್ರಾ ಎಂದು ಗುರುತಿಸಲಾದ ಬಾಲಕಿಯನ್ನು ಎಂಟು ಗಂಟೆಗಳ ಕಾರ್ಯಾಚರಣೆಯ ನಂತರ ರಕ್ಷಿಸಿ, ಖಂಭಾಲಿಯಾ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಆದರೆ ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ಎಂದು ಘೋಷಿಸಲಾಯಿತು.