ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದು ರಾತ್ರಿ ಕಳೆದ ರೇವಣ್ಣ: ಹೀಗಿದೆ ರಾಜಕಾರಣಿಯ ಸೆರೆವಾಸ

ಕೆ..ಆರ್.ನಗರದ ಮಹಿಳೆಯೊಬ್ಬರ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್​.ಡಿ.ರೇವಣ್ಣ, ಈಗಾಗಲೇ ಅರೆಸ್ಟ್ ಆಗಿದ್ದಾರೆ. ನಾಲ್ಕು ದಿನಗಳ ಕಾಲ ಎಸ್​ಐಟಿ ಅಧಿಕಾರಿಗಳ ಗ್ರಿಲ್ ನಡೆಸಿದ್ದರು. ಇದೀಗ ನಿನ್ನೆ ಎಸ್​ಐಟಿ ಕಸ್ಟಡಿ ಅವಧಿ ಅಂತ್ಯವಾಗಿದ್ದು, ಹೆಚ್​ಡಿ.ರೇವಣ್ಣ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಕೈದಿಗಳಂತೆ ರೇವಣ್ಣ ಸೆರೆವಾಸ ಅನುಭವಿಸುತ್ತಿದ್ದಾರೆ.

ರಾಜಕಾರಣಿಯಾಗಿ, ಶಾಸಕರಾಗಿ ಐಷಾರಾಮಿ ಜೀವನ ನಡೆಸಿದ್ದ ರೇವಣ್ಣ, ಸೆಂಟ್ರಲ್ ಜೈಲಿನ ಕ್ವಾರಂಟೈನ್ ಸೆಲ್​ನಲ್ಲಿ 1 ರಾತ್ರಿ ಕಾಲ ಕಳೆದಿದ್ದಾರೆ. ರಾತ್ರಿ ನೀಡಿದ್ದ ಮುದ್ದೆ, ಚಪಾತಿ, ರೈಸ್, ಸಾಂಬಾರ್ ತಡವಾಗಿ ಸೇವಿಸಿದ್ದಾರೆ. ಇತರೆ ಕೈದಿಗಳಂತೆ ಜೈಲಿನಲ್ಲಿ ನೀಡುವ ಊಟವನ್ನೇ ಅವರು ಸೇವಿಸಿದ್ದಾರೆ. ಮನೆಯವರು ತಂದು ಕೊಟ್ಟಿರುವ ಬಟ್ಟೆಯನ್ನು ಪಡೆದಿದ್ದಾರೆ.

ರಾತ್ರಿ ತಡವಾಗಿ ಊಟ ಮಾಡಿ ಮೌನಕ್ಕೆ ಜಾರಿದ್ದಾರೆ. ರಾತ್ರಿ 1 ಗಂಟೆಯವರೆಗೆ ನಿದ್ರೆ ಮಾಡದೆ ಯೋಚಿಸುತ್ತಿದ್ದರು. ಬಳಿಕ ಜೈಲಿನ ಕೊಠಡಿಯಲ್ಲಿ ನಿದ್ರೆಗೆ ಜಾರಿದ್ದಾರೆ. ಇನ್ನು ಹೆಚ್​.ಡಿ.ರೇವಣ್ಣ ಆರೋಗ್ಯ ಸರಿ‌ ಇಲ್ಲದ ಕಾರಣ ನಿನ್ನೆ ರಾತ್ರಿ ಜೈಲಾಧಿಕಾರಿಗಳು ಅವರ ಮೇಲೆ ಹೆಚ್ಚು ನಿಗಾ ಇಟ್ಟಿದ್ದರು. ರೇವಣ್ಣ ಇದ್ದ ಕೊಠಡಿ ಬಳಿ ಓರ್ವ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು. ಇಂದು ಬೆಳಗ್ಗೆ 5.30ಕ್ಕೆ ನಿದ್ರೆಯಿಂದ ಎದಿದ್ದಾರೆ.

Latest Indian news

Popular Stories