ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್​ ರೆಡ್ಡಿ

ಹೈದರಾಬಾದ್: ನವೆಂಬರ್ 30 ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಬ್ಬರದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಇಂದು ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಹೈದರಾಬಾದ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನಸಮೂಹದ ಮುಂದೆ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ಜೊತೆಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಈ ವೇಳೆ ದಾಮೋದರ ರಾಜ ನರಸಿಂಹ, ಉತ್ತಮ್ ಕುಮಾರ್ ರೆಡ್ಡಿ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಸೀತಕ್ಕ, ಪೊನ್ನಂ ಪ್ರಭಾಕರ್, ಶ್ರೀಧರ್ ಬಾಬು, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ, ಜೂಪಲ್ಲಿ ಮತ್ತು ಕೃಷ್ಣ ಪೊಂಗುಲೇಟಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

Latest Indian news

Popular Stories