ಹೆಗಡೆ ಮುಂದೆ ಅಸಮಾಧಾನ ಹೊರಹಾಕಿದ ಮಾಜಿ ಶಾಸಕಿ ರೂಪಾಲಿ ನಾಯ್ಕ್ !

ಕಾರವಾರ : ನಾನು ಸೋತಿದ್ದಕ್ಕೆ ನೋವಾಗಲಿಲ್ಲ, ಅನಂತಕುಮಾರ್ ಹೆಗಡೆ (Anant Kumar Hegde) ಪ್ರಚಾರಕ್ಕೆ ಬಾರದೇ ಇರುವುದಕ್ಕೆ ನೋವಾಗಿದೆ ಎಂದು ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ (Rupali Naik) ಅವರು ಸಂಸದರ ವಿರುದ್ಧ ‌ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

ಇಂದು ಕಾರವಾರದ ಬಿಜೆಪಿ (BJP) ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಒಂದು ಬಾರಿ ಸಂಸದರು ಬಂದು ಹೋಗಿದ್ರೆ ಕಾರವಾರದಲ್ಲಿ ಬಿಜೆಪಿ ಗೆಲ್ಲುತ್ತಿತ್ತು. ಈ ಮಾತನ್ನ ನಾನು ಹೇಳುತ್ತಿಲ್ಲ ಇಡೀ ಕಾರವಾರದ ಜನ ಹೇಳುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಹಿಂದೆ ಅವರದ್ದೇ ಆದ ಕಾರ್ಯಕರ್ತರ ಪಡೆ ಇದೆ ಎಂದರು.

ವಿಧಾನಸಭಾ ಚುನಾವಣೆಯ (Vidhana Sabha Election) ಸಂದರ್ಭದಲ್ಲಿ ಸಂಸದರು ಪ್ರಚಾರಕ್ಕೆ ಬರದಿದ್ದರಿಂದ ನಮಗೆ ಹಿನ್ನಡೆ ಆಯ್ತು. ಈಗಲಾದರೂ ನಮ್ಮ ಪಕ್ಷದ ಕಚೇರಿ ಬಂದು ಕಾರ್ಯಕರ್ತರ ಸಭೆಗೆ ಕರೆದಿದ್ದಕ್ಕೆ ಅಭಿನಂದನೆ ಎಂದರು.

ಅನಂತಕುಮಾರ್ ಹೆಗಡೆ ಸಕ್ರಿಯರಾಗಿದ್ದಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಆದರೆ ಈಗ ಅವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಆಕಾಂಕ್ಷಿ ಅಲ್ಲ. ನಾನು ಯಾವತ್ತೂ ಅನಂತ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ. ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಬಂದಿರುವುದು ಖುಷಿ ಆಗಿದೆ ಎಂದರು.

Latest Indian news

Popular Stories