ತಪ್ಪಿದ ಟಿಕೆಟ್: ಸದಾನಂದ ಗೌಡ ‘ಕೈ’ ಹಿಡಿಯುವ ಸಾಧ್ಯತೆ

ಸದಾನಂದ ಗೌಡರಿಗೆ ಲೋಕಸಭಾ ಟಿಕೆಟ್ ಕೈ ತಪ್ಪಿದೆ. ಇದರ ನಡುವೆ ಅವರ ಪೋಸ್ಟ್ ಕುತೂಹಲ ಮೂಡಿಸಿದೆ.

10 ವರ್ಷ ಉತ್ತರ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಸೇವೆ ಮಾಡಿದ್ದೇನೆ. ನಿಮ್ಮ ಕೆಲಸ ಮಾಡುವ ಅವಕಾಶ ಕೊಟ್ಟು ಆಶೀರ್ವದಿಸಿದ್ದೀರಿ. ಶಕ್ತಿಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದೇನೆ. ನಾನು ನಿಮ್ಮೆಲ್ಲರಿಗೂ ಚಿರಋಣಿ ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ ಇನ್ಮುಂದೆಯೂ ನಿಮ್ಮ ಜತೆಗೆ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಆದ್ರೆ, ಇನ್ಮುಂದೆಯೂ ನಿಮ್ಮ ಜತೆಗೆ ಇರುತ್ತೇನೆ ಎಂದು ಬರೆದುಕೊಂಡಿರುವುದು ಅಚ್ಚರಿಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ಸುಳಿವು ನೀಡಿದಂತೆ ಸದಾನಂದಗೌಡ ಅವರು ಕಾಂಗ್ರೆಸ್​​ನಿಂದ ಸ್ಪರ್ಧೆ ಮಾಡುತ್ತಾರಾ ಎನ್ನುವ ಚರ್ಚೆಗಳು ಶುರುವಾಗಿವೆ.

ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಈ ಹಿಂದೆಯೂ ಹಲವು ಬಾರಿ ಊಹಾಪೋಹಗಳು ಹರಿದಾಡಿದ್ದವು. ಇದೀಗ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಇದೀಗ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಸುಗುಸು ಕೇಳಿಬರುತ್ತಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ , ಡಿವಿಎಸ್​ಗೆ ಆಹ್ವಾನ ನೀಡಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು. ಇದೀಗ ಟಿಕೆಟ್ ಇಲ್ಲ ಎನ್ನುವುದು ಖುದ್ದು ಹೈಕಮಾಂಡ್​ ಸ್ಪಷ್ಟಪಡಿಸಿದ್ದರಿಂದ ಸದಾನಂದಗೌಡ ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾಗುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

Latest Indian news

Popular Stories