Featured StoryNational

ಇಸ್ರೇಲಿ ವಸಾಹತುಶಾಹಿಗಳ ವಿರುದ್ಧ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸುವ ಭಾರತದ ನಿರ್ಧಾರವನ್ನು ಸ್ವಾಗತಿಸಿದ ಜಮಾತ್-ಎ-ಇಸ್ಲಾಮಿ ಹಿಂದ್

ಹೊಸದಿಲ್ಲಿ: ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ ವಸಾಹತುಶಾಹಿಗಳ ವಿರುದ್ಧ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಭಾರತ ಮತದಾನ ಮಾಡಿರುವುದನ್ನು ಜಮಾತ್‌-ಎ-ಇಸ್ಲಾಮಿ ಹಿಂದ್‌ ಸ್ವಾಗತಿಸಿದೆ.

ಜಮಾತ್-ಎ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸದಾತುಲ್ಲಾ ಹುಸೇನಿ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ವಸಾಹತುಶಾಹಿಗಳ ವಿರುದ್ಧ ವಿಶ್ವಸಂಸ್ಥೆಯ ನಿರ್ಣಯದ ಪರವಾಗಿ ಮತ ಚಲಾಯಿಸುವ ಭಾರತ ಸರ್ಕಾರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಪೂರ್ವ ಜೆರುಸಲೇಮ್ ಮತ್ತು ಆಕ್ರಮಿತ ಸಿರಿಯನ್ ಗೋಲನ್ ಸೇರಿದಂತೆ ‘ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯ’ದಲ್ಲಿ ಇಸ್ರೇಲಿ ವಸಾಹತು ಚಟುವಟಿಕೆಗಳನ್ನು ಖಂಡಿಸಲು 145 ದೇಶಗಳೊಂದಿಗೆ ಮತ ಚಲಾಯಿಸುವ ಮೂಲಕ ಭಾರತವು ಪ್ಯಾಲೆಸ್ತೀನ್ ಭೂಮಿಯನ್ನು ಅಕ್ರಮವಾಗಿ ಕಿತ್ತುಕೊಳ್ಳುವುದರ ಮತ್ತು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ಸರಿಯಾದ ಸಂದೇಶವನ್ನು ರವಾನಿಸಿದೆ.

ಸ್ವಾತಂತ್ರ್ಯವನ್ನು ಪಡೆಯಲು ಮತ್ತು ಆಕ್ರಮಣ, ವರ್ಣಭೇದ ನೀತಿಯನ್ನು ಕೊನೆಗೊಳಿಸಲು ಪ್ಯಾಲೆಸ್ಟೀನಿಯಾದ ಹೋರಾಟವು ಭಾರತದ ಅಡಿಪಾಯದ ತತ್ವಗಳಿಗೆ ಅನುಗುಣವಾಗಿದೆ. ನಾವು ಅವರ ನಿರ್ಧಾರವನ್ನು ಬೆಂಬಲಿಸಲು ಕರ್ತವ್ಯ ಬದ್ಧರಾಗಿದ್ದೇವೆ. ಈ ಪ್ರದೇಶದಲ್ಲಿ ಶಾಂತಿಯನ್ನು ಸ್ಥಾಪಿಸಲು ಭಾರತ ಸರ್ಕಾರ ಸಕ್ರಿಯ ಮತ್ತು ಪ್ರಮುಖ ಪಾತ್ರವನ್ನು ವಹಿಸುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button