Featured StoryNationalPrime news

ಸಂಭಾಲ್ ಘರ್ಷಣೆ: ಇಂಟರ್’ನೆಟ್ ಸ್ಥಗಿತ, ಶಾಲಾ-ಕಾಲೇಜಿಗೆ ರಜೆ | ಘಟನೆಯಲ್ಲಿ ನಾಲ್ಕು ಮಂದಿ ಮೃತ್ಯು

ಸಂಭಾಲ್:ಭಾನುವಾರ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿಯೊಂದರ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ ನಂತರ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು NDTV ವರದಿ ಮಾಡಿದೆ.

ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಹಿನ್ನಲೆ ನಡೆದ ಸಮೀಕ್ಷೆಯು ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾದಾಗ ಭಾನುವಾರ ಬೆಳಿಗ್ಗೆ ಸಂಭಾಲ್‌ನಲ್ಲಿ ಗೊಂದಲವು ಉಂಟಾಯಿತು.

ಪ್ರತಿಭಟನಾಕಾರರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದರು. ಪೊಲೀಸರ ಮೇಲೆ ಕಲ್ಲು ಎಸೆದರು. ಗುಂಪು ಚದುರಿಸಲು ಅಶ್ರುವಾಯು ಮತ್ತು ಲಾಠಿಗಳನ್ನು ಬಳಸಿದರು.

ಈ ಗಲಾಟೆಯಲ್ಲಿ ಸುಮಾರು 20 ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ತಲೆಗೆ ಪೆಟ್ಟಾಗಿರುವ ಕಾನ್‌ಸ್ಟೆಬಲ್‌ ಚಿಂತಾಜನಕರಾಗಿದ್ದಾರೆ.

ಇಬ್ಬರು ಮಹಿಳೆಯರು ಸೇರಿದಂತೆ 21 ಜನರನ್ನು ಬಂಧಿಸಲಾಗಿದೆ. ತನಿಖೆಯನ್ನು ಪ್ರಾರಂಭಿಸಲಾಗಿದೆ, ಹಿಂಸಾಚಾರದ ಆರೋಪಿಗಳನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ದಾಖಲಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಭಾಲ್ ತಹಸಿಲ್‌ನಲ್ಲಿ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಜಿಲ್ಲಾಡಳಿತವು 12 ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ನವೆಂಬರ್ 25 ರಂದು ರಜೆ ಘೋಷಿಸಿದೆ.

ನವೆಂಬರ್ 30 ರವರೆಗೆ ಯಾವುದೇ ಹೊರಗಿನವರು, ಸಾಮಾಜಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಪ್ರತಿನಿಧಿಗಳು ಅಧಿಕಾರಿಗಳ ಆದೇಶವಿಲ್ಲದೆ ಸಂಭಾಲ್‌ಗೆ ಪ್ರವೇಶಿಸುವುದನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button