ಎಸ್.ಬಿ.ಐ ಬಾಂಡ್ ಪ್ರಕರಣ | ಎಸ್.ಐ.ಟಿ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ

ನವದೆಹಲಿ: ಚುನಾವಣಾ ಬಾಂಡ್‌ಗಳ ಯೋಜನೆ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಎನ್‌ಜಿಒ ಕಾಮನ್ ಕಾಸ್ ಮತ್ತು ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ಫೆಬ್ರವರಿಯಲ್ಲಿ, ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಎಂದು ಕರೆದಿತ್ತು. ಈ ಬಾಂಡ್‌ಗಳ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿತ್ತು. ಇದರಿಂದಾಗಿ ಕಾರ್ಪೊರೇಟ್ ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಯಾವುದೇ ಕ್ವಿಡ್ ಪ್ರೊ ಕೋ ವ್ಯವಸ್ಥೆಗಳನ್ನು ಮಾಡಲಾಗಿದೆಯೇ ಎಂದು ಮತದಾರರು ನೋಡಬಹುದಾಗಿದೆ.

ತನಿಖೆಯನ್ನು ಎದುರಿಸುತ್ತಿರುವ ಕಂಪನಿಗಳು ಆಡಳಿತ ಪಕ್ಷಕ್ಕೆ ದೇಣಿಗೆ ನೀಡಿರುವುದರಿಂದ ದೇಶದ ಕೆಲವು ಪ್ರಮುಖ ತನಿಖಾ ಸಂಸ್ಥೆಗಳಾದ ಸಿಬಿಐ, ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಗಳು ಭ್ರಷ್ಟಾಚಾರದ ಪರಿಕರಗಳಾಗಿ ಮಾರ್ಪಟ್ಟಿವೆ ಎಂಬುವುದು ಬಹಿರಂಗವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅರ್ಜಿದಾರರ ಪರ ಪ್ರತಿನಿಧಿಸಲಿದ್ದಾರೆ.

Latest Indian news

Popular Stories