ಸುಪ್ರೀಂ ಕೋರ್ಟ್ ಛೀಮಾರಿ ಬೆನ್ನಲ್ಲೇ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಡೇಟಾ ಸಲ್ಲಿಸಿದ SBI

ನವದೆಹಲಿ: ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಆದೇಶಕ್ಕೆ ಅನುಗುಣವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂದು ಮುಚ್ಚಿದ ಲಕೋಟೆಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ಡೇಟಾವನ್ನು ಸಲ್ಲಿಸಿದೆ.

ಬ್ಯಾಂಕ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ ಆದೇಶವನ್ನು ದೃಢೀಕರಿಸುವ ಅಫಿಡವಿಟ್ ಅನ್ನು ಸಹ ಸಲ್ಲಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ 5 ಗಂಟೆಗೆ ಚುನಾವಣಾ ಸಮಿತಿಯು ಡೇಟಾವನ್ನು ಬಿಡುಗಡೆ ಮಾಡಲಿದೆ.

ಈ ಡೇಟಾವನ್ನು ನೀಡಲು ಮಾಡಲು ಮಾರ್ಚ್ 6ರವರೆಗೆ ಗಡುವನ್ನು ವಿಸ್ತರಿಸಲು ಎಸ್‌ಬಿಐ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ತಿರಸ್ಕರಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಗಡುವಿನೊಳಗೆ ಈ ಡೇಟಾವನ್ನು ಪೂರೈಸಲು ವಿಫಲವಾದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಬಗ್ಗೆ ಎಚ್ಚರಿಕೆ ನೀಡಿತ್ತು.

Latest Indian news

Popular Stories