ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಜಾಮೀನು 

ಹೊಸದಿಲ್ಲಿ, ಆ.2: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಪ್ ನಾಯಕ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿಬಿ ವರಾಳೆ ಅವರನ್ನೊಳಗೊಂಡ ಪೀಠವು ಆರು ತಿಂಗಳಿನಿಂದ ಜೈಲಿನಲ್ಲಿರುವ ಸಂಜಯ್ ಸಿಂಗ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಪ್ರಕರಣದಲ್ಲಿ ಎಎಪಿ ನಾಯಕ ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡಿದರೆ ಅಭ್ಯಂತರವಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

Latest Indian news

Popular Stories