ಲೈಂಗಿಕ ದೌರ್ಜನ್ಯ ಪ್ರಕರಣ | ಯಡಿಯೂರಪ್ಪ ಜೈಲು ಪಾಲಾಗುವ ಸಾಧ್ಯತೆ ಇದೆಯಾ?

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ‌. ಈ ಕಾಯಿದೆಯಡಿಯಲ್ಲಿ ನಿರೀಕ್ಷಣ ಜಾಮೀನು ದೊರಕುವುದು ಅಸಾಧ್ಯ. ಆ ಹಿನ್ನಲೆಯಲ್ಲಿ ಬಂಧನವಾಗುವ ಸಾಧ್ಯತೆ ಹೆಚ್ಚಿದೆ.

ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಸಂಬಂಧ ನ್ಯಾಯ ಒದಗಿಸುವಂತೆ ಕೋರಿ, ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು ಹೋಗಿದ್ದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದೀಗ ಈ ದೂರಿನ್ವಯ ಪ್ರಕರಣ ದಾಖಲಾಗಿದ್ದು ಇದೀಗ ಪ್ರಭಾವಿ ರಾಜಕಾರಣಿ ಯಡಿಯೂರಪ್ಪ ಅವರನ್ನು ಈ ಕಾನೂನಿನಡಿಯಲ್ಲಿ ಬಂಧಿಸಬಹುದೇ? ಎಂಬುವುದು ದೊಡ್ಡ ಪ್ರಶ್ನೆ. ಈ ಮುಂಚೆ ಪ್ರಭಾವಿ ಸ್ವಾಮೀಜಿ ಮುರುಘಾ ಶ್ರಿ ಗಳ ವಿರುದ್ಧ ಈ ಆರೋಪ ಬಂದಾಗ ಅವರನ್ನು ಬಂಧಿಸಲಾಗಿತ್ತು. ಇದೀಗ ಯಡಿಯೂರಪ್ಪ ಅವರು ಇಂತಹ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವುದರಿಂದ ರಾಜ್ಯ ಪೊಲೀಸರು ಇವರನ್ನು ಬಂಧಿಸಬಹುದೇ? ಬಿಜೆಪಿ ಇದಕ್ಕೆ ಯಾವ ರೀತಿಯ ಪ್ರತಿಕ್ರಿಯಿಸಬಹುದೆಂಬುದನ್ನು ಕಾದು ನೋಡಬೇಕಾಗಿದೆ‌.

Latest Indian news

Popular Stories