ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಮಂಗಳೂರು: ತನ್ನ ಶಾಲೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯರಿಗೇ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಅಪರಾಧಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ ವಿಶೇಷ ನ್ಯಾಯಾಲಯ) ತೀರ್ಪು ನೀಡಿದೆ.
ಕಲ್ಲಮುಂಡ್ಕೂರು ನಿವಾಸಿ ಗುರುವ ಮೊಗೇರ (49) ಶಿಕ್ಷೆಗೊಳಗಾದ ಶಿಕ್ಷಕ.

ಗುರುವ ಮೊಗೇರಾ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿರುವ ಪ್ರತ್ಯೇಕ ಕೊಠಡಿಗೆ ಕರೆಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಶಾಲೆಯ ಪ್ರಧಾನ ಶಿಕ್ಷಕರಲ್ಲಿ ದೂರು ನೀಡಿದ್ದರು.
ಶಾಲೆಯ ಮುಖ್ಯ ಶಿಕ್ಷಕರು ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಡಿ. ವಿನಯ್ ಸಮಗ್ರ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ನಗರ ಮಹಿಳಾ ಠಾಣೆಯ ಉಪನಿರೀಕ್ಷಕ ಶಿವರುದ್ರಮ್ಮ ಎಸ್. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸಂತ್ರಸ್ತೆ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ವಾದಿಸಿದ್ದರು.

Latest Indian news

Popular Stories