ಶಬರಿಮಲೆ: ಅಯ್ಯಪ್ಪನ ದರ್ಶನಕ್ಕೆ ಬಂದ 12 ವರ್ಷದ ಬಾಲಕಿ ಕುಸಿದುಬಿದ್ದು ಮೃತ್ಯು

ಪಟ್ಟಣಂತಿಟ್ಟ: ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿತುಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ.

ತಮಿಳುನಾಡು ಮೂಲದ ಪದ್ಮಶ್ರೀ (12) ಮೃತಪಟ್ಟ ಬಾಲಕಿಯಾಗಿದ್ದಾಳೆ. ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಬಾಲಕಿ ಕುಸಿದು ಬಿದ್ದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಆಕೆಯನ್ನು ಉಳಿಸಲಾಗಲಿಲ್ಲ. ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ತಿಳಿಸಿವೆ.

ಬಾಲಕಿಗೆ ಈ ಹಿಂದೆಯೇ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು ಎನ್ನಲಾಗಿದೆ.

ಈ ನಡುವೆ ಶುಕ್ರವಾರ ರಾತ್ರಿಯಿಂದಲೇ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಯಾತ್ರಾರ್ಥಿಗಳ ನೂಕುನುಗ್ಗಲು ಕಂಡು ಬರುತ್ತಿದ್ದು, ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಅನೇಕ ಯಾತ್ರಾರ್ಥಿಗಳು ಬೇಲಿಗಳನ್ನು ಮುರಿದು ಅರಣ್ಯ ಮಾರ್ಗಗಳ ಮೂಲಕ ದೇವಾಲಯವನ್ನು ಪ್ರವೇಶಿಸಲು ಶಾರ್ಟ್‌ಕಟ್‌ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದರಿಂದ ದೇವಾಲಯದಲ್ಲಿ ಪ್ರಯತ್ನಿಸಲಾಗಿದ್ದ ತಿರುಪತಿ ಮಾದರಿ ಸರತಿ ವ್ಯವಸ್ಥೆಯು ಸಂಪೂರ್ಣ ವಿಫಲವಾಗಿದೆ ಎಂದು ವರದಿಗಳು ತಿಳಿಸಿವೆ.

ಪುರಷರಷ್ಟೇ ಅಲ್ಲದೇ ಈ ಬಾರಿ ಶಬರಿಮಲೆಗೆ ಬರುವ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಾಗಿದೆ. ಪ್ರತಿ ವರ್ಷಕ್ಕಿಂತ ಈ ಬಾರಿ ಶಬರಿಮಲೆಯಕ್ಕೆ ಬರುವ ಮಹಿಳೆಯರ ಸಂಖ್ಯೆ ಶೇಕಡ 20ರಷ್ಟು ಹೆಚ್ಚಾಗಿದೆ ಎಂದು ದೇವಸ್ವಂ ಮಂಡಳಿ ಮಾಹಿತಿ ನೀಡಿದೆ.

ಸಹಾಯಕ ಅರ್ಚಕ ಸಾವು
ಏತನ್ಮಧ್ಯೆ ಶಬರಿಮಲೆಯದಲ್ಲಿ ಸಹಾಯಕ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಡಿಸೆಂಬರ್ 7 ರಂದು ನಡೆದಿದೆ.

ಮೃತರನ್ನು ತಮಿಳುನಾಡಿನ ಕುಂಭಕೋಣಂನ ರಾಮ್ ಕುಮಾರ್ (43) ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೋಣೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಇವರನ್ನು ಸನ್ನಿಧಾನಂ ಆಸ್ಪತ್ರೆಗೆ ಕರೆದೊಯ್ದರೂ ಜೀವ ಉಳಿಸಲಾಗಲಿಲ್ಲ.

Latest Indian news

Popular Stories