ಶಿವಮೊಗ್ಗ: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಭಸ್ಮ

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಗಿತ್ತು. ಬಟ್ಟೆ ಅಂಗಡಿ, ಫ್ಯಾನ್ಸಿ ಸ್ಟೋರ್‌ಗಳಿಗೆ ಬೆಂಕಿ ಬಿದ್ದಿದ್ದರಿಂದ ದಟ್ಟ ಹೊಗೆ ಆವರಿಸಿ ಕಾರ್ಯಾಚರಣೆಗೆ ತೊಡಕಾಗಿತ್ತು.

ತಕ್ಷಣ ಅಕ್ಕಪಕ್ಕದ ಅಂಗಡಿ ಮಾಲೀಕರಿಗೆ ಕರೆ ಮಾಡಿ ಅಂಗಡಿಗಳನ್ನು ಖಾಲಿ ಮಾಡಲು ತಿಳಿಸಲಾಯಿತು. ಅನೇಕ ಅಂಗಡಿ ಮಾಲೀಕರು ಬಟ್ಟೆ, ಚಪ್ಪಲಿ, ಫ್ಯಾನ್ಸಿ ಸಾಮಾನುಗಳನ್ನು ಹೊರಹಾಕಲು ಪ್ರಯತ್ನಿಸಿದರು. ವಿಷಯ ತಿಳಿಯುತ್ತಿದ್ದಂತೆ ಶಾಸಕ ಎಸ್‌.ಎನ್.ಚನ್ನಬಸಪ್ಪ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

Latest Indian news

Popular Stories