ಶಿರ್ವ:ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

ಶಿರ್ವ:-ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16ವ) ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನಳಾಗಿದ್ದಾಳೆ.

ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾಳೆ, ಮಂಗಳವಾರ ಶಾಲೆಗೆ ಬಂದಿದ್ದಳು.
ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ. ಇವಳ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ಇಂದು ಶಾಲೆಗೆ ರಜೆ ನೀಡಲಾಯಿತು

Latest Indian news

Popular Stories