
Featured StoryState News
ರಾಜಕೀಯದಲ್ಲಿ ವಯಸ್ಸಿಗಿಂತ ಉತ್ಸಾಹ ಮುಖ್ಯ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ ಎಂದರು.
ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿದ್ದಾರೆ.




