ಪಠ್ಯಪುಸ್ತಕ ಪರಿಷ್ಕರಣೆ ಈ ವರ್ಷವಿಲ್ಲ; ಆದರೆ ವಿವಾದಿತ ಪಠ್ಯಗಳಿಗೆ ಖೋಕ್!

ರಾಜ್ಯದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಈ ವರ್ಷ ಪಠ್ಯಪುಸ್ತಕ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಪಠ್ಯ ವಿಷಯಗಳ ಪಟ್ಟಿ ಮಾಡಿ ಅವುಗಳನ್ನು ಬೋಧನೆ ಮಾಡದಂತೆ ಸುತ್ತೋಲೆ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ಅವರನ್ನು ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಪಠ್ಯ ಪರಿಷ್ಕರಣೆ ವಿಚಾರದ ಕುರಿತು ಚರ್ಚೆ ನಡೆಸಲಾಗಿದ್ದು, ಈ ವರ್ಷ ಪಠ್ಯ ಪರಿಷ್ಕರಣೆ ಮಾಡದೇ ಕೆಲ ವಿವಾದಿತ ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಶಾಲೆಗಳಿಗೆ ಅಗತ್ಯ ಪ್ರಮಾಣದಲ್ಲಿ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಹೀಗಾಗಿ ಆ ಪುಸ್ತಕಗಳನ್ನು ವಾಪಸ್ ಪಡೆದು ಹೊಸ ಪಠ್ಯಪುಸ್ತಕ ವಿತರಣೆಗೆ ಸಾಕಷ್ಟು ಸಮಯ ಬೇಕಾಗುತ್ತದೆ. ಹೀಗಾಗಿ ಈ ವರ್ಷದ ಮಟ್ಟಿಗೆ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲ್ಲ. ಬದಲಿಗೆ ಕೆಲ ವಿವಾದಿತ ಪಠ್ಯ ವಿಷಯಗಳ ಪಟ್ಟಿ ಮಾಡಿ ಅವುಗಳನ್ನು ಬೋಧಿಸದಂತೆ ಶಿಕ್ಷಕರಿಗೆ ಸೂಚಿಸ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Latest Indian news

Popular Stories