ಒಗ್ಗಟ್ಟಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಹೋರಾಡಬೇಕು – ಸಿದ್ದರಾಮಯ್ಯ ಕರೆ

ಬೆಂಗಳೂರು: ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಎಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಮಹಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಹೋರಾಡಬೇಕು. ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಕಾರ್ಯಕರ್ತರು ಹೋರಾಡಬೇಕು ಎಂದು ಕರೆ ನೀಡಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿ, ಬಿಜೆಪಿಯ ಸೋಲುವಂತೆ ಮಾಡಬೇಕು. ಕೇಂದ್ರದಲ್ಲಿ ಬಿಜೆಪಿಯೇತರ ಸರಕಾರ ಮಾತ್ರವೇ ದೀನದಲಿತರನ್ನು ಮೇಲಕ್ಕೆತ್ತಲು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಾಧ್ಯ. ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ವಾತಂತ್ರ್ಯ ಹೋರಾಟದ ರೀತಿಯ ಚಳವಳಿ ನಡೆಸಬೇಕಿದೆ ಎಂದು ಹೇಳಿದರು.

ಇದೇ ವೇಳೆ ಅಚ್ಛೇ ದಿನ್ ಘೋಷಣೆಯನ್ನು ಲೇವಡಿ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ಅವರು ಕಪ್ಪುಹಣವನ್ನು ವಾಪಸ್ ಪಡೆದು ಪ್ರತಿಯೊಬ್ಬ ನಾಗರಿಕನ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. 9 ವರ್ಷಗಳಲ್ಲಿ 18 ಕೋಟಿ ಜನರು ಉದ್ಯೋಗಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಧನ, ಸಿಮೆಂಟ್ ಮತ್ತು ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ.  ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಮೋದಿ ಹೇಳುತ್ತಿದ್ದಾರೆ, ಆದರೆ, ಹಿಂದಿನ ಬಿಜೆಪಿ ಸರ್ಕಾರವು ಶೇ.40 ಕಮಿಷನ್‌ ದಂಧೆಯಲ್ಲಿ ಮುಳುಗಿದೆ ಕಿಡಿಕಾರಿದರು.

Latest Indian news

Popular Stories