ಶಾಸಕರ ಅನುದಾನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ 31 ಜಿಲ್ಲೆಗಳ 135 ಶಾಸಕರ ಸಭೆ ಕರೆದಿದ್ದರು. ಸಭೆಯಲ್ಲಿ ಶಾಸಕರಿಗೆ ಕೆಲವು ಷರತ್ತು ವಿಧಿಸುವ ಮೂಲಕ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ್ದಾರೆ.

ಸಭೆಯಲ್ಲಿ ಶಾಸಕರು ಅನುದಾನ ಸಿಗುತ್ತಿಲ್ಲವೆಂದು ಸಿಎಂ ಬಳಿ ಅಳಲು ತೋಡಿಕೊಂಡಿದ್ದರು. ಶಾಸಕರ ಈ ಅಳಲು ಕೇಳಿದ ಸಿಎಂ ಸಿದ್ದರಾಮಯ್ಯ, ಆದ್ಯತೆ ಮತ್ತು ಅನುದಾನದ ಲಭ್ಯತೆ ಆಧಾರದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಅಹವಾಲುಗಳನ್ನು ಜಾರಿಗೆ ತರುವಂತೆ ಶಾಸಕರಿಗೆ ಷರತ್ತು ವಿಧಿಸಿದ್ದಾರೆ. ಇದಕ್ಕೆ ಶಾಸಕರು ಸಮ್ಮತಿ ಸೂಚಿಸಿದ ಬಳಿಕ ಅನುದಾನ ಬಿಡುಗಡೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಮೊದಲ ಕಂತಿನಲ್ಲಿ 145 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರತಿ ಕ್ಷೇತ್ರಕ್ಕೆ 50 ಲಕ್ಷ ರೂ. ನಂತೆ 224 ಕ್ಷೇತ್ರದ ಶಾಸಕರು, 67 ವಿಧಾನಪರಿಷತ್ ಸದಸ್ಯರಿಗೆ ಅನುದಾನ ನೀಡಲಾಗಿದೆ. ಈ ಮೂಲಕ ಸರ್ಕಾರ ಶಾಸಕರ ಸಮಸ್ಯೆಗೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಇನ್ನು ಮೊದಲ ಕಂತು ಬಿಡುಗಡೆಯಾದ ಬಳಿಕವಾದರೂ ಶಾಸಕರ ಅಸಮಾಧಾನ ನಿವಾರಣೆಯಾಗುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ.

Latest Indian news

Popular Stories