ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ  ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು‌ ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು.

ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು.

Latest Indian news

Popular Stories