Featured StoryState News

ಬಿಜೆಪಿಯ ಬೇಡಿಕೆಗೆ ಸೊಪ್ಪು ಹಾಕದ ಸಿದ್ದು: ಝಮೀರ್ ಅಹ್ಮದ್ ಖಾನ್ ಬೆನ್ನಿಗೆ ನಿಂತ ಮುಖ್ಯಮಂತ್ರಿ!

ಬೆಳಗಾವಿ: ಸ್ಪೀಕರ್ ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಒತ್ತಾಯಿಸಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಯನ್ನು ಸಮರ್ಥಿಸಿಕೊಂಡರು. ಅವರು ಉದ್ದೇಶಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು, ಕರ್ನಾಟಕ ವಿಧಾನಸಭೆಯಲ್ಲಿ ಮುಸ್ಲಿಂ ಸ್ಪೀಕರ್ (ಯುಟಿ ಖಾದರ್) ಮುಂದೆ ಬಿಜೆಪಿ ನಾಯಕರು ಕೈಮುಗಿದು, ತಲೆಬಾಗಿ ನಿಲ್ಲುತ್ತಾರೆ. ಕಾಂಗ್ರೆಸ್ ನೀಡಿದ ಅವಕಾಶಕ್ಕೆ ಧನ್ಯವಾದಗಳು ಎಂದು ಹೇಳಿದ್ದರು.

‘ಯಾಕೆ….. ಅವರು (ಜಮೀರ್) ಉದ್ದೇಶಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ’ ಎಂದು ಸಿದ್ದರಾಮಯ್ಯ ಅವರು ಖಾನ್ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button