Featured StoryState News

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಿಗದಿ; ಐದು ಗ್ಯಾರಂಟಿ ಜಾರಿ ಪಕ್ಕಾ – ಸಿ.ಎಮ್ ಸಿದ್ದರಾಮಯ್ಯ

ಬೆಂಗಳೂರು: 5 ಗ್ಯಾರಂಟಿಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಿಗದಿಯಾಗಿದೆ. 5 ಗ್ಯಾರಂಟಿಗಳ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ. ಇಂದಿನ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು.

ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ಮಾಡಲಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button