ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಿದ್ರಿಸುತ್ತಿರುವಂತೆ ತೋರಿಸುವ ಪೋಸ್ಟರ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಧಾನಿಯ ಗಾಢ ನಿದ್ರೆ ಕರ್ನಾಟಕದ ಅಭಿವೃದ್ಧಿಗದೇ ಪ್ರಮುಖ ತೊಂದ್ರೆ, ತನಗೆ ತಾನೇ ಪ್ರಚಾರ ಕೊಟ್ಟುಕೊಳ್ಳಲು ಹಾಗೂ ಬಿಜೆಪಿಗಾಗಿ ಪ್ರಚಾರ ಮಾಡಲು ಸದಾ ಎದ್ದಿರುವ ನರೇಂದ್ರ ಮೋದಿ ಅವರು ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಯಾವಾಗಲೂ ತೂಕಡಿಸುತ್ತಿರುತ್ತಾರೆ.
ಕರ್ನಾಟಕದ ಕಟು ವಾಸ್ತವಕ್ಕೆ ಸ್ಪಂದಿಸದ ಮೋದಿಯಿಂದ ಸದಾ ಪಲಾಯನ ಕೇಂದ್ರವು ಸರಿಯಾಗಿ ಅನುದಾನ ಕೊಡುತ್ತಿಲ್ಲ, ಕನ್ನಡಿಗರ ಮಹತ್ವಾಕಾಂಕ್ಷೆಗಳಿಗೆ ಕಿಂಚಿತ್ತು ಬೆಲೆ ನೀಡುತ್ತಿಲ್ಲ,- ಕೇಂದ್ರದ ಪರಿಹಾರ ಹಣ ಇನ್ನೂ ರೈತರ ಕೈಗೆ ತಲುಪಿಲ್ಲ…
ಮೋದಿ ಮಂತ್ರವಿಷ್ಟೇ ಕಡೆಗಣಿಸು. ನಿರ್ಲಕ್ಷಿಸು. ನಿದ್ರಿಸು. ಮತ್ತದನ್ನೇ ಪುನರಾವರ್ತಿಸು!
ಇನ್ನು ಬಿಜೆಪಿ ಸಂಸದರ ಮಂತ್ರ ಬಾಯಿಗೆ ಬೀಗ ಹಾಕಿಕೊಂಡಿರು. ಮೋದಿಯದ್ದೇ ಜಪ ಮಾಡಿಕೊಂಡಿರು. ಕನ್ನಡಿಗರ ನಂಬಿಕೆಗೆ ದ್ರೋಹ ಬಗೆಯುತ್ತಿರು. ಮೋದಿ ನಿಶ್ಚಿಂತೆಯಿಂದ ನಿದ್ರಿಸಲು ಮತ್ತದನ್ನೇ ಪುನರಾವರ್ತಿಸು!
ಎದ್ದೇಳಿ, ಪ್ರಧಾನಮಂತ್ರಿಯವರೇ! ಕರ್ನಾಟಕದ ನ್ಯಾಯಯುತ ಪಾಲನ್ನು ಕೊಡಬೇಕಾದ ಸಮಯವಿದು ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.