ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

ಕಲಬುರಗಿ: ತೀವ್ರ ಹೃದಯಾಘಾತದಿಂದ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದ ಪೂಜ್ಯ ಶ್ರೀ ಸಿದ್ದರಾಮ ಮಹಾಸ್ವಾಮಿಗಳು (35) ವಿಧಿವಶರಾಗಿದ್ದಾರೆ.

ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದ್ದಲ್ಲಿ ಇಂದು ನಸುಕಿನ ಜಾವ ತೀವ್ರ ಹೃದಯಾಘಾತದಿಂದ ಸಿದ್ದರಾಮ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ರವಿವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

Latest Indian news

Popular Stories