ನಾನು ಜೈಲಿನಲ್ಲಿ ಇರಬೇಕೆಂದು ಕಾಂಗ್ರೆಸ್, ಬಿಜೆಪಿಯ ಕೆಲ ನಾಯಕರು ಬಯಸುತ್ತಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಶಹಾಪುರ/ಬೆಂಗಳೂರು: ತಮ್ಮ ವಿರುದ್ಧ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲು ಮತ್ತು ತಮ್ಮನ್ನು ಬಂಧಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಉದ್ದೇಶಿಸಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶನಿವಾರ ಆರೋಪಿಸಿದ್ದಾರೆ.

ರಾಯಚೂರು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಪರ ಮತಯಾಚಿಸಿ ಶಹಾಪುರದಲ್ಲಿ ನಡೆದ ರೋಡ್‌ಶೋನಲ್ಲಿ ಮಾತನಾಡಿದ ಯತ್ನಾಳ್, ಮೇ 7 ರವರೆಗೆ ನಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತೆ ನೋಡಿಕೊಳ್ಳಲು ತಾನು ಜೈಲಿನಲ್ಲಿ ಇರಬೇಕೆಂದು ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ದೂರಿದರು.

‘ಸಿಎಂ ಸಿದ್ದರಾಮಯ್ಯ, ಶಿವಕುಮಾರ್, ಪ್ರಿಯಾಂಕ್ ಅವರನ್ನು ನೇರವಾಗಿ ಟಾರ್ಗೆಟ್ ಮಾಡುವುದು ನಾನೇ. ‘ಹೊಂದಾಣಿಕೆ ರಾಜಕೀಯ’ದಿಂದಾಗಿ ಬಿಜೆಪಿಯೊಳಗಿನ ಕೆಲವು ನಾಯಕರು ನೇರವಾಗಿ ಏನನ್ನೂ ಹೇಳುತ್ತಿಲ್ಲ. ಸ್ವಪಕ್ಷದಲ್ಲಿಯೇ ಯಾರಾದರೂ ತಮ್ಮ ವಿರುದ್ಧ ಇದ್ದಾರೆಯೇ ಎಂದು ಸುದ್ದಿಗಾರರು ಕೇಳಿದಾಗ, ಮೇ 7 ರ ನಂತರ ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದನ್ನು ನಾನು ಹಂಚಿಕೊಳ್ಳುತ್ತೇನೆ’ ಎಂದು ಅವರು ಹೇಳಿದರು.

Latest Indian news

Popular Stories