ಸೋನಿಯಾ ಗಾಂಧಿ ರಾಜ್ಯಸಭೆಗೆ, ಪ್ರಿಯಾಂಕಾ ರಾಯ್ಬರೇಲಿಯಿಂದ ಲೋಕಾಸಭೆಗೆ ಎಂಟ್ರಿ?

ನವ ದೆಹಲಿ:‌ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಲೋಕಸಭೆ ಚುನಾವಣೆಯ ಬಿರುಸಿನಿಂದ ಹೊರಬರುವ ಸಾಧ್ಯತೆಯಿದೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಹಿರಿಯ ನಾಯಕಿ ರಾಜಸ್ಥಾನದಲ್ಲಿ ರಾಜ್ಯಸಭಾ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳುವ ಸಾಧ್ಯತೆಯಿದೆ. ಪ್ರಿಯಾಂಕಾ ಗಾಂಧಿ ವಾಡ್ರಾ ಅವರು ರಾಯ್ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಪ್ರಿಯಾಂಕ ಗಾಂಧಿ ವಾದ್ರಾ ಅವರ ಮೊದಲ ಚುನಾವಣೆಯಾಗಿದೆ.

77ರ ಹರೆಯದ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಚುನಾವಣೆಯ ಸುತ್ತಿನಲ್ಲಿ ಜೈಪುರದಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಕಾಂಗ್ರೆಸ್ ಪಾಲಿಗೆ ಗೇಮ್ ಚೆಂಜರ್ ಆಗುವ ಸಾಧ್ಯತೆ ಇದೆ.

Latest Indian news

Popular Stories