ಇಂದಿನಿಂದ ಎಸ್​ಎಸ್​ಎಲ್​ಸಿ ಎಕ್ಸಾಂ (SSLC EXAM): ಪರೀಕ್ಷೆ ಬರೆಯಲಿದ್ದಾರೆ 8,69,968 ವಿದ್ಯಾರ್ಥಿಗಳು

ಬೆಂಗಳೂರು: ಇಂದಿನಿಂದ 2023-24ನೇ ಸಾಲಿನ SSLC ವಾರ್ಷಿಕ ಪರೀಕ್ಷೆಗಳು ರಾಜ್ಯದಲ್ಲಿ ಆರಂಭಗೊಳ್ಳಲಿವೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ರಾಜ್ಯದ 2,750 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಡೆಯಲಿವೆ.

ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8,10,368 ಸಾಮಾನ್ಯ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರ, 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್, ಹಿಂದಿ, ಮರಾಠಿ, ಉರ್ದು, ತಮಿಳು, ತೆಲುಗು ಮತ್ತು ಸಂಸ್ಕೃತ ಭಾಷೆಗಳಲ್ಲಿ ಪರೀಕ್ಷೆ ಬರೆಯಬಹುದು.

ಅವ್ಯವಹಾರ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ. ಪರೀಕ್ಷಾ ಕರ್ತವ್ಯದಲ್ಲಿರುವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ಮಂಡಳಿ ನಿಷೇಧಿಸಿದೆ.

ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಎಲ್ಲಾ ಕೇಂದ್ರಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣ ಒದಗಿಸಲಿದೆ.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ (ಡಯಟ್) ಪ್ರಾಂಶುಪಾಲರನ್ನು ಜಿಲ್ಲಾ ಅಧೀಕ್ಷಕ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಡಯಟ್ ಉಪನ್ಯಾಸಕರನ್ನು ವಿಜಿಲೆನ್ಸ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಶಿಕ್ಷಣ ಇಲಾಖೆಯ ಇತರೆ ಅಧಿಕಾರಿಗಳು ಸ್ಥಾನಿಕ ವಿಜಿಲೆನ್ಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

Latest Indian news

Popular Stories