ಚಾಮರಾಜನಗರ, (ಆಗಸ್ಟ್ 09): ಇತ್ತೀಚೆಗೆ ಚಿಕ್ಕ ಮಕ್ಕಳು (Children) ಹೃದಯಾಘಾತದಿಂದ(heart attack) ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಚಿಕ್ಕ ಚಿಕ್ಕ ವಯಸ್ಸಿನ್ಲಲೇ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಶಾಲೆಯಲ್ಲಿ ಬೆಳಗ್ಗೆ ರಾಷ್ಟ್ರಗೀತೆ ಹಾಡುವಾಗ ಹೃದಯಾಘಾತದಿಂದ ಎಸ್ಎಸ್ಎಸ್ ಸಿ ವಿದ್ಯಾರ್ಥಿನಿ(SSLC Student) ಪೆಲಿಸಾ ಮೃತಪಟ್ಟಿದ್ದಾಳೆ.
ಚಾಮರಾಜನಗರ(chamarajanagar) ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಂದು (ಆಗಸ್ಟ್ 09) ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಹಠಾತ್ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ನಿರ್ಮಲ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಪೆಲಿಸಾ ಏಕಾಏಕಿ ಕುಸಿದುಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದುರದೃಷ್ಟವಶಾತ್ ಅಷ್ಟರಾಗಲೇ ಜೀವ ನಿಂತು ಹೋಗಿತ್ತು. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದ ಪೆಲಿಸಾ, ಹಾಸ್ಟೆಲ್ ನಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದಳು. ಆದ್ರೆ, ವಿಧಿ ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿನಿಯನ್ನು ಬಲಿ ಪಡೆದುಕೊಂಡಿದೆ.