ದಾಖಲೆಯ 15ನೇ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ್ದ ಐತಿಹಾಸಿಕ 15ನೇ ಬಜೆಟ್ ಕುರಿತಂತೆ ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನನ್ನ ಕ್ಷೇತ್ರಕ್ಕೆ ಕುಡಿಯುವ ನೀರು, ಘನತ್ಯಾಜ್ಯ ಸಮಸ್ಯೆ ಬಹೆಹರಿಸಿದ್ದಾರೆ.
110 ಹಳ್ಳಿಗಳಿಗೆ ಇದರಿಂದ ಅನುಕೂಲ ಆಗಲಿದೆ, ನಾನು ಶಾಸಕನಾಗಿ ನನ್ನ ಕ್ಷೇತ್ರದ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ. ಬೇರೆ ಶಾಸಕರ ಹೇಳಿಕೆಗಳು ನನಗೆ ಬೇಕಿಲ್ಲ. ಬೆಂಗಳೂರು ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಬೆಂಗಳೂರಿಗೆ ಸಂಬಂಧಿಸಿ ಬಗ್ಗೆ ಮಾತ್ರ ಮಾತನಾಡುತ್ತೇನೆ. ಕುಡಿಯುವ ನೀರು, ಕಸ ವಿಲೇವಾರ, ಟ್ರಾಫಿಕ್, ವೈಟ್ ಟ್ಯಾಪಿಂಗ್, ಫ್ಲೈ ಓವರ್ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ ಇನ್ನು ಪೂರ್ಣ ಪ್ರಮಾಣದ ಬಜೆಟ್ ನೋಡಿಲ್ಲ. ಬಜೆಟ್ ವಿರೋಧ ಮಾಡುವವರಿಗೆ ನಾನು ಏನೂ ಹೇಳುವುದಿಲ್ಲ. ಟೀಕೆ ಮಾಡುವುದು ಅವರ ವೈಯಕ್ತಿಕ ವಿಚಾರ. ಅದರ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
15ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಎಲ್ಲಾ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ‘ಅಡ್ಡಕಸುಬಿ’ ಬಜೆಟ್‌ನಂತೆ ಕಾಣುತ್ತಿದೆ. ಇದರಲ್ಲಿ ಅರ್ಥಶಾಸ್ತ್ರವೂ ಇಲ್ಲ, ಅಭಿವೃದ್ಧಿಯೂ ಇಲ್ಲ, ದೂರದೃಷ್ಟಿಯೂ ಎಂದು ಟೀಕಿಸುತ್ತಿರುವಾಗ ಸೋಮಶೇಖರ್ ಮಾತ್ರ ಅಭಿನಂದನೆ ತಿಳಿಸಿದ್ದು ಅಚ್ಚರಿಗೆ ಕಾರಣವಾಗಿದೆ.
ಈಗಾಗಲೇ ಶಾಸಕ ಸೋಮಶೇಖರ್ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದಿದ್ದು, ಕಾಂಗ್ರೆಸ್ ಸರ್ಕಾರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ದಿನಗಣನೆ ಶುರುವಾಗಿದೆ. ಈ ವೇಳೆ ಸೋಮಶೇಖರ್ ಅವರಿಂದ ಇಂತಹ ಹೇಳಿಕೆಗಳು, ಅವರ ನಡೆ ಬಿಜೆಪಿ ನಾಯಕರಿಗೆ ದೊಡ್ಡ ತಲೆ ನೋವಾಗಿದೆ.