ರಾಜ್ಯ ಬಜೆಟ್: ಈ ನಗರಗಳಲ್ಲಿ ರಾತ್ರಿ 1 ರ ವರೆಗೆ ವ್ಯಾಪಾರಕ್ಕೆ ಅವಕಾಶ !

ಇಂದು ಬಜೆಟ್ ಮಂಡಿಸಿರುವ ಸಿಎಂ, ಬೆಂಗಳೂರು ಸೇರಿದಂತೆ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಹಾಗೂ ವ್ಯಾಪಾರದ ದೃಷ್ಟಿಯಿಂದ ರಾತ್ರಿ ವೇಳೆ ವ್ಯಾಪಾರ ವಹಿವಾಟಿನ ಸಮಯ ಹೆಚ್ಚಿಸಲಾಗಿದೆ. ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ನಿರ್ಬಂಧವನ್ನು ಮದ್ಯರಾತ್ರಿ 1ರ ವರೆಗೆ ವಿಸ್ತರಿಸುವುದಾಗಿ ಸಿಎಂ ಹೇಳಿದ್ದಾರೆ.

ಹೀಗಾಗಿ ಬಿಬಿಎಂಪಿ ಸೇರಿದಂತೆ ಬಿಬಿಎಂಪಿ ರಾಜ್ಯದಲ್ಲಿ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರಪಾಲಿಕೆಗಳಿವೆ. ಈ ಎಲ್ಲಾ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನು ಮುಂದೆ ರಾತ್ರಿ 1ರ ವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ ಎನ್ನಲಾಗುತ್ತಿದೆ.

Latest Indian news

Popular Stories