ಮಕ್ಕಳ ಪೋರ್ನ್ ವಿಡಿಯೋ ಡೌನ್‌ಲೋಡ್ ಮಾಡುವುದು ಅಥವಾ ನೋಡುವುದು ಅಪರಾಧವಲ್ಲ | ಮಕ್ಕಳನ್ನು ಚಿತ್ರಗಳಿಗೆ ಬಳಸುವುದು ಅಪರಾಧ: ಸುಪ್ರೀಂ ಕೋರ್ಟ್

ನವದೆಹಲಿ: ಪೋಕ್ಸೋ ಅಥವಾ ಐಟಿ ಕಾಯಿದೆ ಅಡಿ ಕೇವಲ ಎಲೆಕ್ಟ್ರಾನಿಕ್ ಡಿವೈಸ್ ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಮಕ್ಕಳನ್ನು ಒಳಗೊಂಡ ಕೆಲವು ಅಶ್ಲೀಲ ವಿಡಿಯೋವನ್ನು ಮೊಬೈಲ್ ಫೋನ್‌ನಲ್ಲಿ ಡೌನ್‌ಲೋಡ್ ಮಾಡಿ ವೀಕ್ಷಿಸಿದ್ದಕ್ಕಾಗಿ 28 ವರ್ಷದ ಎಸ್ ಹರೀಶ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಜನವರಿ 11 ರಂದು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿತ್ತು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ, 2000 ರ ಅಡಿಯಲ್ಲಿ ಹರೀಶ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುವ ಎನ್‌ಜಿಒ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಶುಕ್ರವಾರ ತೀರ್ಪು ಕಾಯ್ದಿರಿಸಿದೆ.

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ, ಕೇವಲ ಮಕ್ಕಳ ಅಶ್ಲೀಲತೆಯನ್ನು ಡೌನ್‌ಲೋಡ್ ಮಾಡುವುದು ಅಥವಾ ನೋಡುವುದು ಅಪರಾಧವಲ್ಲ. ಆದರೆ, ಖಂಡಿತವಾಗಿಯೂ ಮಕ್ಕಳನ್ನು ಅಶ್ಲೀಲ ಚಿತ್ರಗಳಲ್ಲಿ ಬಳಸುವುದು ಅಪರಾಧ ಎಂದು ಸ್ಪಷ್ಟಪಡಿಸಿದೆ.

Latest Indian news

Popular Stories