ಸೆ.12ಕ್ಕೆ ದೇಶದ್ರೋಹ ಕಾಯ್ದೆ ಸಿಂಧುತ್ವ ವಿಚಾರಣೆ ನಡೆಸಲಿದೆ ಸರ್ವೋಚ್ಚ ನ್ಯಾಯಾಲಯ

ಹೊಸದಿಲ್ಲಿ: ವಸಾಹತುಶಾಹಿ ಕಾಲದ ದೇಶದ್ರೋಹ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆ.12ರಂದು ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂ ರ್ತಿ ಡಿ.ವೈ.ಚಂದ್ರಚೂಡ್‌, ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್‌ ಸಿನ್ಹಾ ಅವರನ್ನೊಳಗೊಂಡ ನ್ಯಾಯ ಪೀಠ ವಿಚಾರಣೆ ನಡೆಸಲಿದೆ. ಮೇ 1ರಂದೇ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತ್ತು. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಹಳೆಯ ಕಾಯ್ದೆಯನ್ನು ಪುನರ್‌ ಪರಿಶೀಲಿಸುವ ಪ್ರಕ್ರಿಯೆ ಮುಂಚೂಣಿ ಘಟ್ಟವನ್ನು ತಲುಪಿದೆ ಎಂದು ಅಟಾರ್ನಿ ಜನರಲ್‌ ಆರ್‌.ವೆಂಕಟರಮಣಿ ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡಿದ್ದರು. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿತ್ತು.

Latest Indian news

Popular Stories