ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯ: ಚುನಾವಣಾ ಬಾಂಡ್​ ಅಸಂವಿಧಾನಿಕ ಎಂದ ಸುಪ್ರೀಂ

ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್(Electoral Bonds)​ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದೆ.

ಚುನಾವಣಾ ಬಾಂಡ್​ ಯೋಜನೆಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ತನ್ನ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್​ಗಳನ್ನು ನಿಷೇಧಿಸಿದೆ. ಸುಪ್ರೀಂ ಕೋರ್ಟ್ ಇದನ್ನು ಅಸಂವಿಧಾನಿಕ ಎಂದು ಕರೆದಿದೆ ಮತ್ತು ಬೇರೆ ಆಯ್ಕೆಯನ್ನು ಪರಿಗಣಿಸುವಂತೆ ಸರ್ಕಾರವನ್ನು ಕೇಳಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಪ್ರಕರಣದ ಕುರಿತು ಸರ್ವಾನುಮತದ ತೀರ್ಪು ನೀಡಿದೆ.

ಆದರೆ, ಪೀಠದಲ್ಲಿ ಎರಡು ಭಿನ್ನ ಅಭಿಪ್ರಾಯಗಳಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಯಿತು.

Latest Indian news

Popular Stories