ಸುರಪುರ ಉಪ ಚುನಾವಣೆ: ರಾಜೂಗೌಡಗೆ ಬಿಜೆಪಿ ಟಿಕೆಟ್

ಬೆಂಗಳೂರು: ಕಾಂಗ್ರೆಸ್ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಸ್ಥಾನಕ್ಕೆ ಲೋಕಸಭೆ ಚುನಾವಣೆ ಜೊತೆಯಲ್ಲಿಯೇ ಮೇ.7ರಂದು ಉಪಚುನಾವಣೆ ನಿಗದಿಯಾಗಿದ್ದು, ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ದಿವಂಗತ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ನಿರೀಕ್ಷೆಯಂತೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಹೀಗಾಗಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ.

ಸುರಪುರ ಮತಕ್ಷೇತ್ರದಲ್ಲಿ 10 ತಿಂಗಳ ಹಿಂದೆ 2023ರ ಮೇ ತಿಂಗಳಲ್ಲಿ ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಎದುರಾಳಿಯಾಗಿ ಸ್ಪರ್ಧಿಸಿದ್ದ ರಾಜೂಗೌಡ ಅವರನ್ನು 25,000ಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದರು. ಈಗ ಮತ್ತೆ ಉಪ ಚುನಾವಣೆ ನಿಗದಿಯಾಗಿದ್ದು, ರಾಜೂಗೌಡ ಈಗ ವೇಣುಗೋಪಾಲ ನಾಯಕ ಅವರನ್ನು ಎದುರಿಸಲಿದ್ದಾರೆ.

Latest Indian news

Popular Stories