ಶಾಹೀನ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಅಬ್ದುಲ್ ಖದೀರ್ ಅವರಿಗೆ ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಕನ್ನಡ ಪ್ರಭ, ಸುವರ್ಣ ನ್ಯೂಸ್ ವತಿಯಿಂದ ನೀಡಲಾಗುವ “ಸುವರ್ಣ ಕನ್ನಡಿಗ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನಾಡಿನ ವಿವಿಧ ಸಾಧಕರನ್ನು ಗುರುತಿಸಿ ಕನ್ನಡ ಪ್ರಭ ಮತ್ತು ಸುವರ್ಣ ನ್ಯೂಸ್ ಏಷ್ಯಾನೆಟ್ ಸುದ್ದಿವಾಹಿನಿ ಪ್ರತಿವರ್ಷ ಈ ಪ್ರಶಸ್ತಿಯನ್ನು ನೀಡುತ್ತದೆ.
ಡಾ. ಅಬ್ದುಲ್ ಖದೀರ್ ಅವರು ಶಾಹಿನ್ ವಿದ್ಯಾಸಂಸ್ಥೆಯನ್ನು ಕಟ್ಟಿ ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು ಬೆಳಗಿಸಿದ್ದು ಸಾಮಾಜಿಕ ಸೇವಾ ರಂಗದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.