“ರಾಹುಲ್ ಮಾತು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ, ಹಿಂದು ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಅವರು ಹೇಳಿದ್ದು” : ಸ್ವಾಮಿ ಅವಿಮುಕ್ತೇಶ್ವರಾನಂದ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ತಮ್ಮ ಮೊದಲ ಭಾಷಣ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿತ್ತು. ಬಿಜೆಪಿ ಭಾಷಣವನ್ನು ವಿವಾದ ಎಂಬಂತೆ ಮಾತನಾಡಿತ್ತು.

ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಭಾನುವಾರ ಕಾಂಗ್ರೆಸ್ ನಾಯಕರ ಹೇಳಿಕೆಯನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ರಾಹುಲ್ ಗಾಂಧಿ, ಬಿಜೆಪಿ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಗಾಂಧಿಯವರು “ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ” ಎಂದು ಕರೆದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದರು.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ ಅವಿಮುಕ್ತೇಶ್ವರಾನಂದ, ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಪ್ರತಿಪಾದಿಸಿದರು.

“ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ನಾವು ಕೇಳಿದ್ದೇವೆ. ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ” ಎಂದು ಅವರು ಹೇಳಿದರು.

ಗಾಂಧಿಯವರ ಹೇಳಿಕೆಯ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ. ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಮಠಾಧೀಶರು ಸ್ಪಷ್ಟವಾಗಿ ಬಿಜೆಪಿ ಸೃಷ್ಟಿಸುತ್ತಿರುವ ವಿವಾದಕ್ಕೆ ಎಳ್ಳುನೀರು ಬಿಟ್ಟಿದ್ದಾರೆ.

Latest Indian news

Popular Stories