ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು

ತಮಿಳುನಾಡು: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.

2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ ೨೪ ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

Latest Indian news

Popular Stories