ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ!

ಮೈಸೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿರುವ ರಾಜ್ಯ ಕಾಂಗ್ರೆಸ್‌ಗೆ  ಮೈಸೂರು ಭಾಗದಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಮೈಸೂರಿನ ಜಿಲ್ಲೆ ನರಸಿಂಹರಾಜ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ಅನಾರೋಗ್ಯದ ಕಾರಣ ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗೆ ಈ ಬಾರಿ ಟಿಕೆಟ್ ಬೇಡ. ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ನನ್ನ ಮೇಲೆ ಹಲ್ಲೆಯಾದ ಬಳಿಕ ಆರೋಗ್ಯ ತುಂಬಾ ಏರುಪೇರಾಗಿದೆ. ಮೊದಲಿನಂತೆ ನಾನು ಮಾನಸಿಕ ಹಾಗೂ ದೈಹಿಕವಾಗಿಯೂ ಶಕ್ತಿಯುತವಾಗಿಲ್ಲ. ಹಾಗಾಗಿ ನನಗೆ ಟಿಕೆಟ್ ಬೇಡ. ಆದ್ರೆ ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಪತ್ರ ಬರೆದಿದ್ದಾರೆ.

ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ನಂತರ ತನ್ವೀರ್ ಸೇಠ್ ಅಭಿಮಾನಿಯೊಬ್ಬ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಾಜಕೀಯ ನಿವೃತ್ತಿ ಪತ್ರದ ವಿಷಯ ತಿಳಿಯುತ್ತಿದ್ದಂತೆಯೇ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ದಂಡು ಮೈಸೂರಿನಲ್ಲಿರುವ ತನ್ವೀರ್ ಸೇಠ್ ನಿವಾಸದ ಮುಂದೆ ಜಮಾಯಿಸಿದ್ದು, ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸುತ್ತಿದ್ದಾರೆ.

ಮುಂದೆಯೂ ನೀವೇ ಎಂಎಲ್‌ಎ, ಸ್ಪರ್ಧಿಸಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ತನ್ವೀರ್ ಕಾಲಿಗೆ ಬಿದ್ದು ನಿರ್ಧಾರ ಬದಲಾಯಿಸುವಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ಇನ್ನು ಬೆಂಬಲಿಗನೋರ್ವ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾನೆ.

Latest Indian news

Popular Stories