ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹಕ್ಕೆ ರವಾನೆ

ರಾಜಮಹೇಂದ್ರವರಂ: ಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರನ್ನು ವಿಜಯವಾಡದ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಸೋಮವಾರ ಮುಂಜಾನೆ ಇಲ್ಲಿನ ಕೇಂದ್ರ ಕಾರಾಗೃಹಕ್ಕೆ ಅವರನ್ನು ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಡದಿಂದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂಗೆ ಸುಮಾರು 200 ಕಿಲೋಮೀಟರ್ ಪ್ರಯಾಣದ ನಂತರ ಅವರು ಜೈಲು ತಲುಪಿದರು. 

“ಚಂದ್ರಬಾಬು ನಾಯ್ಡು ಅವರು ಮಧ್ಯರಾತ್ರಿ 1:20 ರ ಸುಮಾರಿಗೆ ಜೈಲಿಗೆ ಹೋದರು” ಎಂದು ಪೂರ್ವ ಗೋದಾವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ ಜಗದೀಶ್ ಪಿಟಿಐಗೆ ತಿಳಿಸಿದ್ದಾರೆ.

Latest Indian news

Popular Stories