ಏಕದಿನ ವಿಶ್ವಕಪ್​ಗೆ ಭಾರತ ತಂಡ ಪ್ರಕಟ

ಮುಂಬಯಿ: ನಿರೀಕ್ಷೆಯಂತೆ ಏಕದಿನ ವಿಶ್ವಕಪ್​ಗೆ(ICC World Cup) ಆತಿಥೇಯ ಭಾರತ ತನ್ನ 15 ಮಂದಿ ಸಂಭಾವ್ಯ(icc world cup india squad) ಆಟಗಾರರ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್​ ಅವರು ಈ ತಂಡವನ್ನು ಪ್ರಕಟಿಸಿದರು.

ಭಾರತ ತಂಡ

ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಷರ್​ ಪಟೇಲ್‌, ಸೂರ್ಯಕುಮಾರ್‌.

ಅಭ್ಯಾಸ ಪಂದ್ಯದಲ್ಲಿ ಆಸೀಸ್​ ಎದುರಾಳಿ

ಭಾರತ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ವಿರುದ್ಧ ಆಡಲಿದೆ. ಈ ಪಂದ್ಯ ಸೆಪ್ಟೆಂಬರ್​ 30 ರಂದು ಗುವಾಹಟಿಯಲ್ಲಿ ನಡೆಯಲಿದೆ. 29ರಂದು ಆರಂಭಗೊಳ್ಳಲಿರುವ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಅದೇ ದಿನ ನಡೆಯುವ ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್​ ಮುಖಾಮುಖಿಯಾಗಲಿದೆ. ಲಂಕಾ ಮತ್ತು ಬಾಂಗ್ಲಾ ಪಂದ್ಯ ಗುವಾಹಟಿಯಲ್ಲಿ ನಡೆದರೆ ಪಾಕ್​-ಕಿವೀಸ್​ ಪಂದ್ಯ ಹೈದರಾಬಾದ್​ನಲ್ಲಿ ನಡೆಯಲಿದೆ.

ಭಾರತ ಪಂದ್ಯದ ಸಂಪೂರ್ಣ ವೇಳಾಪಟ್ಟಿ

ಭಾರತ vs ಆಸ್ಟ್ರೇಲಿಯಾ- 8 ಅಕ್ಟೋಬರ್, ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

ಭಾರತ vs ಅಫಘಾನಿಸ್ತಾನ- 11 ಅಕ್ಟೋಬರ್, ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ

ಭಾರತ vs ಪಾಕಿಸ್ತಾನ- 14 ಅಕ್ಟೋಬರ್, ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

ಭಾರತ vs ಬಾಂಗ್ಲಾದೇಶ- 19 ಅಕ್ಟೋಬರ್, ಎಂಸಿಎ ಸ್ಟೇಡಿಯಂ, ಪುಣೆ

ಭಾರತ vs ನ್ಯೂಜಿಲ್ಯಾಂಡ್​- 22 ಅಕ್ಟೋಬರ್, HPCA ಸ್ಟೇಡಿಯಂ, ಧರ್ಮಶಾಲಾ

ಭಾರತ vs ಇಂಗ್ಲೆಂಡ್- 29 ಅಕ್ಟೋಬರ್, ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

ಭಾರತ vs ಶ್ರೀಲಂಕಾ- 2 ನವೆಂಬರ್, ವಾಂಖೆಡೆ ಸ್ಟೇಡಿಯಂ, ಮುಂಬೈ

ಭಾರತ vs ದಕ್ಷಿಣ ಆಫ್ರಿಕಾ- 5 ನವೆಂಬರ್, ಈಡನ್ ಗಾರ್ಡನ್ಸ್, ಕೋಲ್ಕತ್ತಾ

ಭಾರತ vs ನೆದರ್ಲೆಂಡ್ಸ್​ – 12 ನವೆಂಬರ್, ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

Latest Indian news

Popular Stories