ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಬಿಸಿಲಿನ ಝಳಕ್ಕೆ ಜನ ತತ್ತರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತೆ ಎರಡು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ತಾಪಮಾನವು ಕಳೆದ ವರ್ಷ ಫೆಬ್ರವರಿಗಿಂತ 1-2 ಡಿಗ್ರಿ ಹೆಚ್ಚಾಗಿದೆ ಎಂದು ಐಎಂಡಿ ಅಧಿಕಾರಿಗಳು ಗಮನಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಬಿಸಿಗಾಳಿ ಅಲೆಯ ಪರಿಸ್ಥಿತಿಗಳ ಮುನ್ಸೂಚನೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಐಎಂಡಿಯ ಹಿರಿಯ ವಿಜ್ಞಾನಿ ಎ ಪ್ರಸಾದ್ ಮಾತನಾಡಿ, ಸದ್ಯ ಬೆಂಗಳೂರಿನ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕಲಬುರಗಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ಇದೆ. ಮಾರ್ಚ್ ತಿಂಗಳಿಗೂ ಮುನ್ನ ಮತ್ತಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ.