ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ದೆಹಲಿಯಲ್ಲಿ ವಿಹೆಚ್ ಪಿ ಪ್ರತಿಭಟನೆ

ದೆಹಲಿ: ಜಮ್ಮು-ಕಾಶ್ಮೀರದಲ್ಲಿ 9 ಮಂದಿ ಸಾವಿಗೆ ಕಾರಣವಾಗಿದ್ದ ಉಗ್ರ ದಾಳಿಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದೆ.

ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಗ್ರ ದಾಳಿಯಲ್ಲಿ ಮೃತಪಟ್ಟವರು ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದರು.

ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಬರೆದಿರುವ ಪತ್ರವನ್ನು ಪ್ರತಿಭಟನಾ ನಿರತರು ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲಿದರು.

53 ಮಂದಿ ಪ್ರಯಾಣಿಸಬಹುದಾಗಿದ್ದ ಬಸ್ ನಲ್ಲಿ ವೈಷ್ಣೋದೇವಿ ದರ್ಶನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ವಾಹನದ ಮೇಲೆ ಭಾನುವಾರ ಸಂಜೆ ಭಯೋತ್ಪಾದಕರು ದಾಳಿ ನಡೆದಿದ ಪರಿಣಾಮ ಬಸ್ ಕಂದಕಕ್ಕೆ ಉರುಳಿ 41 ಮಂದಿ ಗಾಯಗೊಂಡು 9 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿಗಳಿಂದ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು.

Latest Indian news

Popular Stories