ಇಂದು ಮೈತ್ರಿ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಮೋದಿ!

ಇಂದು (ಜೂನ್ 9 ರಂದು) ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಜೂನ್ 9 ರ ಭಾನುವಾರ ಸಂಜೆ 7:15 ರ ಸುಮಾರಿಗೆ ನಡೆಯಲಿದೆ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ (Narendra Modi)  ಸಜ್ಜಾಗಿದ್ದಾರೆ.

ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ವಿದೇಶಿ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರು ಇಂದು ನವದೆಹಲಿಗೆ ಆಗಮಿಸುವ ಯೋಜನೆ ಇದೆ. ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Latest Indian news

Popular Stories