ಉಡುಪಿ, ಜು.5: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಆದೇಶ ಹೊರಡಿಸಿದ್ದಾರೆ