ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ತಡ ರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು. ಮಂಗಳೂರಿಗೆ ತೆರಳುವವರನ್ನು ಪೊಲೀಸರು ಕೊಟ್ಟಿಗೆಹಾರದಲ್ಲೇ ತಡೆದು ವಾಪಸ್ ಕಳಿಸಿದ್ದಾರೆ.