ಗಣೇಶ ವಿಸರ್ಜನೆ ವೇಳೆ ದುರಂತ: ತಂದೆ-ಮಗ ಸೇರಿ ಮೂವರು ಕೆರೆಯಲ್ಲಿ ಮುಳುಗಿ ಮೃತ್ಯು

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ.

ಮೃತರನ್ನು ತಂದೆ ಮಗ, 46 ವರ್ಷದ ರೇವಣ್ಣ, 26 ವರ್ಷದ ಶರತ್ ಹಾಗೂ ದಯಾನಂದ ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Latest Indian news

Popular Stories