ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಬೇಕು: ಕೆ.ಎಸ್.ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ದಕ್ಷಿಣ ಭಾರತಕ್ಕಾಗಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಅಂತಹವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ನ್ಯಾಯಪೀಠ ಈ ಆದೇಶಗಳನ್ನು ಹೊರಡಿಸಿದ್ದು, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ನಮ್ಮ ನಾಯಕರು ಉತ್ತಮ ಭಾಷೆಯನ್ನು ಏಕೆ ಬಳಸುತ್ತಿಲ್ಲ? ಹೇಳಿಕೆಗಳನ್ನು ನೀಡುವಾಗ ಅವರು ಉತ್ತಮ ಸಂಸ್ಕೃತಿಯನ್ನು ಏಕೆ ಪ್ರತಿಬಿಂಬಿಸುವುದಿಲ್ಲ?’ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕ ರಾಜ್ಯದಲ್ಲಿ ವಿಭಿನ್ನ ಸಿದ್ಧಾಂತಗಳ ಜನರು ಇರುವುದರಿಂದ ರಾಜಕಾರಣಿಗಳು ಜಾಗರೂಕರಾಗಿರಬೇಕು. ಶಾಲಾ ಮಕ್ಕಳು ತಮ್ಮನ್ನು ಗಮನಿಸುತ್ತಿದ್ದಾರೆ ಎಂದು ಅವರಿಗೆ ತಿಳಿದಿರಬೇಕು ಎಂದು ನ್ಯಾಯಪೀಠ ಹೇಳಿದೆ.

ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ದೇಶ ವಿರೋಧಿಗಳು. “ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವ ಅಂತಹ ವ್ಯಕ್ತಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ನಾನು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದರು.

ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಪೊಲೀಸರು ಈಶ್ವರಪ್ಪ ವಿರುದ್ಧ ದಾವಣಗೆರೆ ಮತ್ತು ಯಶವಂತಪುರ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಿದ್ದರು.

ಇದನ್ನೂ ಓದಿ:

ಗುಂಡಿಕ್ಕಿ ಕೊಲ್ಲಬೇಕು’ ಹೇಳಿಕೆ: ‘ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ’ ವಿರುದ್ಧ ‘FIR’ ದಾಖಲು

Latest Indian news

Popular Stories