
Featured StoryNational
ಸುರಂಗ ಕಾರ್ಯಾಚರಣೆ ಯಶಸ್ವಿ- 41 ಮಂದಿ ಕಾರ್ಮಿಕರ ರೋಚಕ ರಕ್ಷಣೆ
ಉತ್ತರಕಾಶಿ: ಉತ್ತರಖಾಂಡ್ ನ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾ ಸುರಂಗದೊಳಗೆ ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, 41 ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.
ನಿರಂತರ 17 ದಿನಗಳ ಕಾರ್ಯಾಚರಣೆಯ ಬಳಿಕ ಸುರಂಗದ ಒಳಗೆ ಸಿಲುಕಿಕೊಂಡಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಹೊರ ಕರೆತರಲಾಗಿದೆ.
ಇಂದು ಸುರಂಗದ ಒಳಗೆ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲಾಗುವುದು ಎಂದು ಹೇಳಲಾಗಿತ್ತು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ 41 ಆಂಬುಲೆನ್ಸ್, ವೈದ್ಯ ಸಿಬ್ಬಂದಿಗಳನ್ನು ಸ್ಥಳದಲ್ಲೇ ನಿಯೋಜಿಸಲಾಗಿತ್ತು. ಅಲ್ಲದೇ ತೀವ್ರ ಅಸ್ವಸ್ಥರಾಗಿರುವ ಕಾರ್ಮಿಕರನ್ನು ಏರ್ಲಿಫ್ಟ್ ಮಾಡುವ ಉದ್ದೇಶದಿಂದ ಸ್ಥಳದಲ್ಲೇ ಭಾರತೀಯ ವಾಯುಪಡೆಯ ಚಿನೋಕ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿತ್ತು.




