ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್​ಗಳ ಪತನ, 10 ಮಂದಿ ಮೃತ್ಯು

ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನವಾಗಿ 10 ಮಂದಿ ಸಾವನ್ನಪ್ಪಿದ್ದಾರೆ. ಇಂದು ಪೆರಾಕ್​ನ ಲುಮುಟ್​ನಲ್ಲಿ ಎರಡು ರಾಯಲ್ ಮಲೇಷಿಯನ್ ನೌಕಾಪಡೆಯ ಹೆಲಿಕಾಪ್ಟರ್​ಗಳು ಪರಸ್ಪರ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ.

ಫ್ರೀ ಮಲೇಷ್ಯಾ ಟುಡೇ ವರದಿ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮೃತದೇಹಗಳನ್ನು ಹೆಲಿಕಾಪ್ಟರ್​ಗಳಿಂದ ಹೊರ ತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ.

Latest Indian news

Popular Stories