ಉ.ಕ | ಚುನಾವಣಾ ಕರ್ತವ್ಯ ನಿರ್ಲಕ್ಷ್ಯ : ಇಂಜಿನಿಯರ್ ಪಾಂಡುರಂಗ ಕುಲಕರ್ಣಿ ಅಮಾನತು

ಕಾರವಾರ : ಕಾರವಾರ ಬಂದರು ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್
ಪಾಂಡುರಂಗ ಕುಲಕರ್ಣಿ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಸಂಬಂಧಿಸಿದಂತೆ FST (ಎಫ್ ಎಸ್ ಟಿ ) ತಂಡದ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಚುನಾವಣಾ ಕೆಲಸದಲ್ಲಿ ನಿರ್ಲಕ್ಷ್ಯತನ ಮತ್ತು ಬೇಜವಾಬ್ದಾರಿತನ ತೋರ್ಪಡಿಸಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಪಾಂಡುರಂಗ ಕುಲಕರ್ಣಿ ವಿರುದ್ಧ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ನಿಯಮ 11 ರನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಅಮಾನತ್ತು ಮಾಡಿದ್ದಾರೆ. ಈ ಸಂಬಂಧ ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.

ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950 ಕಲಂ 32 ರಡಿ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 134 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಸದ್ರಿಯವರನ್ನು – ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶವಾಗುವವರೆಗೆ ಅಮಾನತ್ತು ಮಾಡಿ ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.

ಪಾಂಡುರಂಗ ಕುಲಕರ್ಣಿ ಅಮಾನತ್ತು ಅವಧಿಯಲ್ಲಿ ಮೇಲಾಧಿಕಾರಿಗಳ ಪರವಾನಿಗೆ ಪಡೆಯದೇ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಪಾಂಡುರಂಗ ಕುಲಕರ್ಣಿ ಅಮಾನತ್ತು ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1958 ರನಿಯಮ 98 ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ.
…..

Latest Indian news

Popular Stories